ಬೆಂಗಳೂರು : ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಜಾಲ ಬಯಲಿಗೆ ಬಂದಿದ್ದು, ಈ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಬನ್ನೂರು ಹೈವೇ ಬಳಿಯ ಹುಣಗನಹಳ್ಳಿ ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಯುತ್ತಿರುವುದನ್ನ ಪತ್ತೆ ಹಚ್ಚಲಾಗಿದೆ.
ಯಶಸ್ವಿಯಾಗಿ ಭ್ರೂಣ ಹಂತಕರನ್ನು ಸೆರೆಹಿಡಿದಿದ್ದಾರೆ. ಗರ್ಭಿಣಿ ಮಹಿಳೆಯ ಸಹಾಯ ಪಡೆದು ಲಿಂಗ ಭ್ರೂಣ ಪತ್ತೆ ಕಾರ್ಯಚಟುವಟಿಕೆ ನಡೆಸುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ ನಾಲ್ಕು ಗರ್ಭಿಣಿ ಸ್ತ್ರೀಯರು ಲಿಂಗ ಭ್ರೂಣ ಪತ್ತೆ ಮಾಡಿಸಿಕೊಳ್ಳಲು ಹಾಜರಿರುವುದು ಹಾಗೂ ಸ್ಕ್ಯಾನಿಂಗ್ ಬಳಕೆ ಮಾಡುವ ಉಪಕರಣವು ಕಂಡು ಬಂದಿದೆ. ಹೆರಿಗೆ ಪೂರ್ವ ಭ್ರೂಣ ಲಿಂಗಪತ್ತೆ (ಪಿ.ಸಿ.ಪಿ.ಎನ್.ಡಿ.ಟಿ) ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದ್ದು, ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಆರೋಗ್ಯ ಇಲಾಖೆ ನಿರಂತರ ಹೋರಾಟ ನಡೆಸುತ್ತಿದೆ.. ಹೆಣ್ಣು ಭ್ರೂಣ ಹತ್ಯೆ ಒಂದು ಸಮಾಜಿಕ ಪಿಡುಗು.. ಸಮಾಜ ಈ ಬಗ್ಗೆ ಜಾಗೃತರಾಗಿ ಭ್ರೂಣ ಹತ್ಯೆಯ ವಿರುದ್ಧ ಸಮರ ಸಾರಲು ಮುಂದಾಗಬೇಕು. ಆರೋಗ್ಯ ಇಲಾಖೆ ಸದಾ ಭ್ರೂಣ ಹಂತಕರ ವಿರುದ್ಧ ಸಹಕರಿಸುವವರ ಜೊತೆಯಿದೆ.. ಯಾರು ಎಷ್ಟೇ ದೊಡ್ಡವರಿದ್ದರು, ಹೆಣ್ಣು ಭ್ರೂಣ ಹಂತಕರನ್ನು ಮಟ್ಟಹಾಕಲು ನಮ್ಮ ಸರ್ಕಾರ ಕಠುಬದ್ಧವಾಗಿದೆ ಎಂದಿದ್ದಾರೆ.