ಬೆಳಗಾವಿ: ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಮೂರು ಭ್ರೂಣಹತ್ಯೆ ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಲ್ಲಿ 13 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗಂಡೂರಾವ್ ತಿಳಿಸಿದ್ದಾರೆ.
ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಉತ್ತರಿಸುದ ಸಚಿವರು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರ ಗ್ರಾಮಾಂತರ ಜಿಲ್ಲೆಯ ಎಸ್ ಪಿ ಜಿ ಆಸ್ಪತ್ರೆಯ 6 ಜನರನ್ನು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸರ್ಕಾರಿ ವಸತಿ ಗೃಹದ 6 ಜನರನ್ನು ಮತ್ತು ಬೆಂಗಳೂರ ನಗರ ಜಿಲ್ಲೆಯ ದ್ಯಾನಿμï ಪಾಲಿ ಕ್ಲಿನಿಕ್ ಆಸ್ಪತ್ರೆಯ ಒಬ್ಬರನ್ನು ಬಂಧಿಸಲಾಗಿದೆ. ಈ ಪ್ರಕರಣಗಳ ತನಿಖೆಯು ನ್ಯಾಯಾಲಯಗಳಲ್ಲಿ ಬಾಕಿ ಇರುತ್ತದೆ ಎಂದು ಸಚಿವರು ತಿಳಿಸಿದರು.
ಈ ಹಿಂದೆ ಬೆಳಕಿಗೆ ಬಂದಿದ್ದ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮವಹಿಸಲಾಗಿದ್ದು, ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಭ್ರೂಣ ಲಿಂಗ ಪತ್ತೆಗೆ ಸಂಬಂಧಿಸಿದ ಪ್ರಕರಣದಲ್ಲಿ ಶಾಮೀಲಾಗಿರಬೇಕೆಂಬ ಹಿನ್ನೆಲೆಯಲ್ಲಿ ಡಾ.ಶಶಿ ಎಸ್.ಎಲ್, ರೇಡಿಯಾಲಜಿಸ್ಟ್ ಇವರನ್ನು ದಿನಾಂಕ: 03-09-2025ರಂದು ಸೇವೆಯಿಂದ ಅಮಾನತ್ತುಗೊಳಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.

