SHOCKING NEWS: ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದು ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲಿಯೇ ಇಂತದ್ದೊಂದು ಕೃತ್ಯವೆಸಗಲಾಗುತ್ತಿತ್ತು ಎಂಬುದು ಆಘಾತಕ್ಕೆ ಕಾರಣವಾಗಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿಹೆಚ್ಒ ಡಾ.ಮೋಹನ್, ಟಿಹೆಚ್ಒ ಡಾ.ಅರವಿಂದ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಿಸಲಾಗಿದೆ.

ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆನಂದ್, ಅಶ್ವಿನಿ ಹಾಗೂ ಮತ್ತೋರ್ವ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಆನಂದ್ ಪಾಂಡವಪುರ ತಾಲೂಕು ಆಸ್ಪತ್ರೆಯ ಆಂಬುಲೆನ್ಸ್ ಚಾಲಕನಾಗಿದ್ದಾನೆ. ಅಶ್ವಿನಿ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆಆಧಾರದಲ್ಲಿ ಡಿ ಗ್ರೂಪ್ ಸಿಬ್ಬಂದಿ. ಚಾಲಕ ಆನಂದ್ ಗೆ ನಿಗದಿಯಾಗಿದ್ದ ಸರ್ಕಾರಿ ನಿವಾಸದಲ್ಲಿಯೇ ಕೃತ್ಯವೆಸಗಲಾಗುತ್ತಿತ್ತು.

ದಂಧೆಯಲ್ಲಿ ಕೆಲವು ವೈದ್ಯಾಧಿಕರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪಾಂಡವಪುರ ಪೂಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read