ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೀರಸಂದ್ರದ ಪ್ರತಿಷ್ಠಿತ ಫಾಕ್ಸ್ ಕಾನ್ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆಯಾಗಿದೆ.
ಬೀರಸಂದ್ರದ ಫಾಕ್ಸ್ ಕಾನ್ ಕಂಪನಿಯಲ್ಲಿ 25,000 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಹಿಳೆಯರ ಶೌಚಾಲಯದಲ್ಲಿ ಭ್ರೂಣ ಪತ್ತೆಯಾದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಫಾಕ್ಸ್ ಕಾನ್ ಆಡಳಿತ ಮಂಡಳಿಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ವಿಶ್ವನಾಥಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

