ಸರ್ಕಾರ ರೈತರಿಗೆ 7 ಗಂಟೆ ‘ತ್ರೀ ಫೇಸ್ ವಿದ್ಯುತ್’ ನೀಡದಿದ್ದರೆ ಉಗ್ರ ಹೋರಾಟ : ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ

ಚಿಕ್ಕಬಳ್ಳಾಪುರ : ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಇಂದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ನಡೆದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ಕಾರ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಬೇಕು, ಸರ್ಕಾರ ರೈತರಿಗೆ ಏಳು ಗಂಟೆ ತ್ರೀ ಫೇಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿದ್ಯುತ್ ಪಡೆಯುವುದು ನಮ್ಮ ಹಕ್ಕು ಸರ್ಕಾರ ಅದನ್ನು ಕಸಿದುಕೊಳ್ಳುತ್ತಿದೆ. ನಾನು ಅಧಿಕಾರದಲ್ಲಿದ್ದಾಗ ವಿದ್ಯುತ್ ಇಲಾಖೆಗೆ ಹತ್ತು ಸಾವಿರ ಕೊಟಿ ರೂ. ನೀಡಿದ್ದೆ. ಇವರು ಯಾವುದೇ ಅನುದಾನ ನೀಡಿಲ್ಲ . ಸಿಎಂ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡುತ್ತೀವಿ ಎಂದು ಹೇಳಿದ್ದರು. ಈಗ ಮೂರು ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಜನರಿಗೆ ಮೋಸ ಮಾಡಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ವಾಗ್ಧಾಳಿ ನಡೆಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read