ಮಂಗಳೂರು: ಮೀನು ಮಾರಾಟ ಮಾಡುವ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ಗ್ರಾಮದ ಸಂತೆಕಟ್ಟೆ ಸಮೀಪ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಹೊಡೆದಾಡಿಕೊಂಡಿದ್ದಾರೆ.
ಮೀನು ಮಾರಾಟದ ಬಗ್ಗೆ ಅಂಗಡಿಯವರ ನಡುವೆ ಮೊದಲಿಗೆ ಮಾತಿನ ಚಕಮಕಿ ನಡೆದು, ನಂತರ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಶನಿವಾರ ನಡೆದ ಘಟನೆಯ ವಿಡಿಯೋ ಆದರಿಸಿ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜು ಮ್ಯಾಥ್ಯೂ, ಆದಂ ಎಂಬುವರ ಅಂಗಡಿಯವರ ನಡುವೆ ಮೀನಿನ ಮಾರಾಟದ ಬಗ್ಗೆ ಮಾತಿನ ಚಕಮಕಿ ನಡೆದಿದೆ. ನಂತರ ಅವರು ಹೊಡೆದಾಡಿಕೊಂಡಿದ್ದಾರೆ. ಕಡಬ ಠಾಣೆ ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ರಾಜು ಮ್ಯಾಥ್ಯೂ, ಆದಂ, ಫಯಾಜ್, ರಕ್ಷಿತ್ ಮಾಣಿ, ನೌಫಲ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
