HomeEntertainmentಅಕ್ಟೋಬರ್ 1 ರಂದು 'ಫೈಟರ್' ಚಿತ್ರದ ಟ್ರೈಲರ್ ರಿಲೀಸ್

ಅಕ್ಟೋಬರ್ 1 ರಂದು ‘ಫೈಟರ್’ ಚಿತ್ರದ ಟ್ರೈಲರ್ ರಿಲೀಸ್

ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹು ನಿರೀಕ್ಷಿತ ‘ಫೈಟರ್’ ಸಿನಿಮಾ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರತಂಡ ಇದೀಗ ಅಕ್ಟೋಬರ್ ಒಂದರಂದು ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದ ಜೊತೆ ಟ್ರೈಲರ್ ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ನೂತನ್ ಉಮೇಶ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರವನ್ನು ಆಕಾಶ್ ಎಂಟರ್ಪ್ರೈಸಸ್ ಬ್ಯಾನರ್ ನಡಿ ಕೆ ಸೋಮಶೇಖರ್ ನಿರ್ಮಾಣ ಮಾಡಿದ್ದು, ಗುರುಕಿರಣ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿನೋದ್ ಪ್ರಭಾಕರ್ ಸೇರಿದಂತೆ ಲೇಖಚಂದ್ರ, ಪಾವನ ಗೌಡ, ನಿರೋಷ ರಾಧಾ, ಶರತ್ ಲೋಹಿತಾಶ್ವ, ದೀಪಕ್ ಶೆಟ್ಟಿ, ಗಿರಿಜಾ ಲೋಕೇಶ್, ಕುರಿ ಪ್ರತಾಪ್, ಅನಿಲ್ ಕುಮಾರ್ ಬಣ್ಣ ಹಚ್ಚಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಅಕ್ಟೋಬರ್ ಆರರಂದು ಈ ಸಿನಿಮಾ ರಾಜ್ಯದ್ಯಂತ ತೆರೆ ಕಾಣಲಿದೆ.

For Latest News Updates, Join Our Whatsapp Community🚩
RELATED ARTICLES

Most Popular