BIG NEWS : ಸುಳ್ಳು ಸುದ್ದಿ, ದ್ವೇಷ ಭಾಷಣಕ್ಕೆ ‘ಸುಮೋಟೋ ಕೇಸ್’ ಹಾಕಿ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಸುಳ್ಳು ಸುದ್ದಿ, ದ್ವೇಷ ಭಾಷಣಕ್ಕೆ ‘ಸುಮೋಟೋ ಕೇಸ್’ ಹಾಕಿ ಎಂದು ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ನೃತಪತುಂಗ ರಸ್ತೆಯ ರಾಜ್ಯ ಪೊಲೀಸ್ ಇಲಾಖೆ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಹಿರಿಯ ಅಧಿಕಾರಿಗಳ ವಾರ್ಷಿಕ ಸಮಾವೇಶದಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು.

ನೈತಿಕ ಪೊಲೀಸ್ ಗಿರಿ, ದ್ವೇಷ ಭಾಷಣಕಾರರು ಹಾಗೂ ಸುಳ್ಳು ಸುದ್ದಿ ಹಬ್ಬಿಸುವವರು ಸೇರಿ ದಂತೆ ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡುವವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ( ಸುಮೋಟೋ) ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಆ ನಾಡು ಪ್ರಗತಿಯಾಗುತ್ತದೆ. ಈ ನಿಟ್ಟಿನಲ್ಲಿ ಪೊಲೀಸರು ಕೆಲಸ ಮಾಡಬೇಕು. ಸುಳ್ಳು ಸುದ್ದಿ ಹಬ್ಬಿಸುವ ಹಾಗೂ ದ್ವೇಷ ಭಾಷಣದ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಸಾರ್ವಜನಿಕರು ದೂರುನೀಡುವವರೆಗೆ ಕಾಯದೇ ಪೊಲೀಸರೇ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read