ಬೆಂಗಳೂರು : ಬಿಜೆಪಿಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಕ್ಕಿಂತ ಮಾರಿಕೊಳ್ಳುವುದರಲ್ಲೇ ಹೆಚ್ಚಿನ ಆಸಕ್ತಿ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ.
ಬಿಜೆಪಿ ಅವಧಿಯಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಕ್ಕಿಂತ ಹುದ್ದೆಗಳನ್ನು ಮಾರಿಕೊಳ್ಳುವುದರಲ್ಲೇ ಹೆಚ್ಚಿನ ಆಸಕ್ತಿ ತೋರಿಸಲಾಗಿತ್ತು! ಚುನಾವಣೆಗೂ ಮುನ್ನ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ನಮ್ಮ ವಾಗ್ದಾನದಂತೆ ಹಲವು ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಅರಣ್ಯ ಇಲಾಖೆಯಲ್ಲಿ 800 ಹುದ್ದೆಗಳಿಗೆ ನೇಮಕಾತಿಗೆ ಕ್ರಮ ಕೈಗೊಳ್ಳುವ ಮೂಲಕ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಯ ಆಡಳಿತ ಯಂತ್ರವನ್ನು ಚುರುಕುಗೊಳಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ.
ಕಾಂಗ್ರೆಸ್ & ಬಿಜೆಪಿ ನಡುವೆ ರಾಜಕೀಯ ಅಖಾಡದಲ್ಲಿ ಕಿಚ್ಚು ಹೊತ್ತಿದ್ದು, ಪರಸ್ಪರ ಟೀಕೆ, ತಿಕ್ಕಾಟಗಳು ನಡೆಯುತ್ತಿದೆ.
https://twitter.com/INCKarnataka/status/1745379649482539364

 
			 
		 
		 
		 
		 Loading ...
 Loading ... 
		 
		 
		