HomeEntertainmentಹೊಸ ಚಲನಚಿತ್ರ ನೀತಿ, ಸರ್ಕಾರದಿಂದ ಓಟಿಟಿ ವೇದಿಕೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಸಿಎಂಗೆ ಫಿಲಂ...

ಹೊಸ ಚಲನಚಿತ್ರ ನೀತಿ, ಸರ್ಕಾರದಿಂದ ಓಟಿಟಿ ವೇದಿಕೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಸಿಎಂಗೆ ಫಿಲಂ ಚೇಂಬರ್ ಮನವಿ

ಬೆಂಗಳೂರು: ಕನ್ನಡ ಚಲನಚಿತ್ರ ರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ, ಸರ್ಕಾರದಿಂದ ಓಟಿಟಿ ವೇದಿಕೆ, ಏಕಪರದೆ ಚಿತ್ರಮಂದಿರಗಳ ನವೀಕರಣ ಸೇರಿ ವಿವಿಧ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಮನವಿ ಸಲ್ಲಿಸಲಾಗಿದೆ.

ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ಡಾ. ಜಯಮಾಲಾ ನೇತೃತ್ವದಲ್ಲಿ ನಿಯೋಗ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿಯಾಗಿ ವಿವಿಧ ಬೇಡಿಕೆ ಒಳಗೊಂಡ ಮನವಿ ಸಲ್ಲಿಸಿದ್ದು, ಮನವಿ ಸ್ವೀಕರಿಸಿದ ಸಿಎಂ ಡಿ.ಕೆ. ಶಿವಕುಮಾರ್ ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎನ್ನುವುದನ್ನು ಆಲೋಚಿಸಲಾಗುವುದು. ಹೊಸ ಚಲನಚಿತ್ರ ನೀತಿ ತರಲು ಚರ್ಚೆ, ಸಹಾಯಧನ ಹೆಚ್ಚಳ, ಚಿತ್ರನಗರಿ ನಿರ್ಮಾಣ ನಿರ್ಮಾಣಕ್ಕೆ ಘೋಷಣೆ ಮಾಡಿದ ಅನುದಾನ ಬಿಡುಗಡೆ ಬಗ್ಗೆ ಹಣಕಾಸು ಇಲಾಖೆ ಎಸಿಎಸ್ ಗೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

ಸರ್ಕಾರದಿಂದಲೇ ಓಟಿಟಿ ವೇದಿಕೆ ಪ್ರಾರಂಭಿಸಬೇಕು. ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ ಮೂಲಕ ಚಿತ್ರಮಂದಿರಗಳ ಲೈಸೆನ್ಸ್ ನವೀಕರಣಕ್ಕೆ ಏಕಗವಾಕ್ಷಿ ಯೋಜನೆ ತರಬೇಕು. ಹೊಸ ಚಿತ್ರಮಂದಿರ ನಿರ್ಮಾಣಕ್ಕೆ ವಿಶೇಷ ಪ್ರೋತ್ಸಾಹ ತೆರಿಗೆ ಮೂಲ ಸೌಕರ್ಯ ವ್ಯವಸ್ಥೆ ಮಾಡಬೇಕು. ಹಳೆಯ ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನಿಕರಣಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲದ ವ್ಯವಸ್ಥೆ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಯೋಗದೊಂದಿಗೆ ಕನ್ನಡ ಚಿತ್ರರಂಗದ ವಿವಿಧ ವಿಷಯಗಳ ಕುರಿತು ಚರ್ಚಿಸಿದ ಸಿಎಂ, ನಾಡಿನ ಕಲೆ ಮತ್ತು ಚಲನಚಿತ್ರ ರಂಗದ ಬೆಳವಣಿಗೆಗೆ ನಮ್ಮ ಸರ್ಕಾರ ಸದಾ ಪೂರಕವಾಗಿ ಸ್ಪಂದಿಸಲಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಡಳಿಯ ಮಾಜಿ ಅಧ್ಯಕ್ಷರಾದ ಗಂಗರಾಜು, ಸಾ. ರಾ. ಗೋವಿಂದ್, ಗೌರವ ಕಾರ್ಯದರ್ಶಿ ರಮೇಶ್ ಬಾಬು, ಹಿರಿಯ ನಟ ಸುಂದರ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular