HomeLatest NewsBREAKING : ಕ್ಷಮೆ ಕೇಳಲು ನಟ 'ಕಮಲ್ ಹಾಸನ್' ಗೆ 24 ಗಂಟೆ ಗಡುವು ನೀಡಿದ...

BREAKING : ಕ್ಷಮೆ ಕೇಳಲು ನಟ ‘ಕಮಲ್ ಹಾಸನ್’ ಗೆ 24 ಗಂಟೆ ಗಡುವು ನೀಡಿದ ಫಿಲ್ಮ್ ಚೇಂಬರ್.!

ಬೆಂಗಳೂರು : ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ಕ್ಷಮೆ ಕೇಳಬೇಕೆಂದು ಕನ್ನಡ ಪರ ಸಂಘಟನೆಗಳು ಪಟ್ಟು ಹಿಡಿದಿದೆ.

ಕ್ಷಮೆ ಕೇಳಲು ಫಿಲ್ಮ್ ಚೇಂಬರ್ ನಟ ಕಮಲ್ ಹಾಸನ್ ಗೆ 24 ಗಂಟೆ ಗಡುವು ನೀಡಿದೆ ಎಂಬ ಮಾಹಿತಿ ಲಭ್ಯ ವಾಗಿದೆ.
ಕಮಲ್ ಹಾಸನ್ ಕನ್ನಡಿಗರಿಗೆ ನೋವುಂಟು ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲ್ಲ. ಅವರು ಕ್ಷಮೆ ಕೇಳಲೇಬೇಕು. ಇಲ್ಲವಾದಲ್ಲಿ ಅವರ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಮಲ್ ಹಾಸನ್ ದುಬೈನಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ, ಅವರಿಗೆ 24 ಗಂಟೆ ಕಾಲಾವಕಾಶ ಕೊಡಲಾಗಿದೆ. ಅವರು ಕ್ಷಮೆ ಕೇಳಲು ಕಾಲಾವಕಾಶ ನೀಡುವಂತೆ ವಿತರಕರು ಮನವಿ ಮಾಡಿದ್ದಾರೆ. ಆದ್ದರಿಂದ ಅವರಿಗೆ 24 ಗಂಟೆ ಕಾಲಾವಕಾಶ ಕೊಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಕೂಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದು, ಕಮಲ್ ಹಾಸನ್ ಕ್ಷಮೆಗೆ ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಮುಲಾಜಿಲ್ಲದೇ ಅವರ ಸಿನಿಮಾಗಳನ್ನು ನಿಷೇಧಿಸಲು ಸೂಚಿಸಿದ್ದಾರೆ. ಹಾಗಾಗಿ ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಕ್ಷಮೆ ಕೇಳದಿದ್ದರೆ ಥಗ್ ಲೈಫ್ ಸಿನಿಮಾ ರಿಲೀಸ್ ಗೆ ಬಿಡಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular