BREAKING : ಕನ್ನಡ ಚಿತ್ರರಂಗಕ್ಕೆ ಬಜೆಟ್ ಕೊಡುಗೆ : ಮೈಸೂರಿನಲ್ಲಿ ‘ಫಿಲ್ಮ್ ಸಿಟಿ ’ ನಿರ್ಮಾಣ

ಬೆಂಗಳೂರು : ಮೈಸೂರಿನಲ್ಲೂ ಫಿಲ್ಮ್ ಸಿಟಿ  ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಅನುದಾನ ನೀಡಲಾಗುವುದು, ಬ್ರ್ಯಾಂಡ್ ಬೆಂಗಳೂರಿಗೆ ಬಂಪರ್ ಗಿಫ್ಟ್ ನೀಡಲಾಗಿದ್ದು, ನಮ್ಮ ಮೆಟ್ರೋಗೆ 30,000 ಕೋಟಿ ರೂ. ಅನುದಾನ ನೀಡಲಾಗಿದೆ. 45 ಸಾವಿರ ಕೋಟಿ ಅನುದಾನ ನೀಡಲಾಗಿದೆ. ವೈಟ್ ಟಾಪಿಂಗ್, ರಸ್ತೆಅಭಿವೃದ್ಧಿ, ತ್ಯಾಜ ವಿಲೇವಾರಿ, ಮೆಟ್ರೋ ಉಪನಗರ ರೈಲಿಗೆ 30 ಸಾವಿರ ಕೋಟಿ ರೂ. ನಿಯೋಜನೆ ಮಾಡಲಾಗಿದೆ ಎಂದರು.

ಈಗಾಗಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇದೀಗ 14 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ.ರಾಜ್ಯದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗಿರುವುದರಿಂದ ವಾರ್ಷಿಕವಾಗಿ 52 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಅನುಗ್ರಹ ಯೋಜನೆ ಮರು ಜಾರಿ ಮಾಡಲಾಗುವುದು, ರೈತರಿಗೆ 3 ರಿಂದ 5 ಲಕ್ಷ ರೂ.ವರೆಗೆ ಅಲ್ಪಾವಧಿ ಸಾಲ ನೀಡಲಾಗುವುದು. ಮೈಸೂರು-ಕಲಬುರಗಿಯಲ್ಲಿ ಟ್ರಾಮಾ ಸೆಂಟರ್ ಗೆ ಅನುದಾನ, ನಮ್ಮ ಮೆಟ್ರೋಗೆ 30,000 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದು, ದೇಶದಲ್ಲಿ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕಲಬುರಗಿಯಲ್ಲಿ ತಾಯಿ ಮತ್ತು ಮಗು ಆಸ್ಪತ್ರೆ ನಿರ್ಮಾಣ, ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾ ಆಸ್ಪತ್ರೆ ಉನ್ನತೀಕರಣ ಮಾಡಲಾಗುವುದು, ಕನಕಪುರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಶೇಂಗ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲಾಗುವುದು. ರೈತರ ಹಿತದೃಷ್ಟಿಯಿಂದ ಕೇಂದ್ರದ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ.

ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ರಾಜ್ಯದ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಎಇಡಿ ಯಂತ್ರ ಸ್ಥಾಪನೆ ಮಾಡಲಾಗುವುದು. ಹಠಾತ್ ಹೃದಾಯಾಘಾತ ತಡೆಯಲು 6 ಕೋಟಿ ರೂ. ವೆಚ್ಚದಲ್ಲಿ ಯಂತ್ರ ಸ್ಥಾಪನೆ ಮಾಡಲಾಗುವುದು ಎಂದರು.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read