BIG NEWS: ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲ ಪತ್ತೆ; ನಾಲ್ವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲವನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.

ಹೆಣ್ಣು ಭ್ರೂಣ ಲಿಂಗ ಪತ್ತೆಗೆ ವೈದ್ಯರೇ ಸಾಥ್ ನೀಡಿತ್ತಿರುವುದು ಬೆಳಕಿಗೆ ಬಂದಿದೆ. ಮೈಸೂರಿನ ಬನ್ನೂರು ರಸ್ತೆ ವಸಂತನಗರದ ಶಿವಲಿಂಗೇಗೌಡ, ಮಂಡ್ಯ ಜಿಲ್ಲೆಯ ಕೂಳೇನಹಳ್ಳಿಯ ನಯನ್ ಕುಮಾರ್, ಪಾಂಡವಪುರ ತಾಲೂಕಿನ ಸುಂಕದನ್ನೂರು ಗ್ರಾಮದ ನವೀನ್ ಕುಮಾರ್, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದ ಟಿ.ಎಂ.ವೀರೇಶ್ ಬಂಧಿತರು.

15ರಿಂದ 20 ಸಾವಿರ ರೂಪಾಯಿ ಹಣ ಪಡೆದು ಈ ದಂಧೆ ನಡೆಸುತ್ತಿದ್ದರು. ಹಳೆ ಮದ್ರಾಸ್ ರಸ್ತೆ ಬಳಿ ಗರ್ಭಿಣಿಯೊಬ್ಬರನ್ನು ಪರೀಕ್ಷೆಗೆ ಕರೆದೊಯ್ಯಲು ವೀರೇಶ್ ಹಾಗೂ ತಂಡ ಪ್ಲಾನ್ ಮಾಡಿತ್ತು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಹಳೇ ಮದ್ರಾಸ್ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸಿದ್ದರು. ಈ ವೇಳೆ ಕಾರೊಂದರಲ್ಲಿ ಬಂದ ದಂಧೆಕೋರರು ಪೊಲೀಸರನ್ನು ಕಾಣುತ್ತಿದ್ದಂತೆ ಕಾರು ಸಮೇತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆರೋಪಿಗಳನ್ನು ಅಡ್ಡಗಟ್ಟಿ ಹಿಡಿದ ಪೊಲೀಸರಿಗೆ ಕಾರಿನಲ್ಲಿ ಗರ್ಭಿಣಿ ಮಹಿಳೆ ಇರುವುದು ಗೊತ್ತಾಗಿದೆ.

ಕಾರಿನಲ್ಲಿದ್ದ ಮೂವರನ್ನು ವಿಚಾರಣೆ ನಡೆಸಿದಾಗ ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಜಾಲದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read