HomeLatest Newsರಾಜ್ಯಾದ್ಯಂತ ಪರಿಶಿಷ್ಟ ಜಾತಿ ಕುಟುಂಬದವರಿಗೆ ಅಂತಿಮ ಅವಕಾಶ: ಸಮಗ್ರ ಸಮೀಕ್ಷೆ ಕಾರ್ಯಾವಧಿ ಜೂ. 30ರವರೆಗೆ ವಿಸ್ತರಣೆ

ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಕುಟುಂಬದವರಿಗೆ ಅಂತಿಮ ಅವಕಾಶ: ಸಮಗ್ರ ಸಮೀಕ್ಷೆ ಕಾರ್ಯಾವಧಿ ಜೂ. 30ರವರೆಗೆ ವಿಸ್ತರಣೆ

ಬೆಂಗಳೂರು: ಪರಿಶಿಷ್ಟ ಜಾತಿ ಕುಟುಂಬದವರಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಏಕಸದಸ್ಯ ಆಯೋಗ ರಾಜ್ಯಾದ್ಯಂತ ಸಮೀಕ್ಷಾ ದಿನಾಂಕವನ್ನು ದಿನಾಂಕ: 23.06.2025 ರಿಂದ ದಿನಾಂಕ: 30.06.2025 ರವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು(Emperical Data) ಸಂಗ್ರಹಿಸಲು, ದಿನಾಂಕ: 05-05-2025 ರಿಂದ ಮನೆ-ಮನೆ ಭೇಟಿ ಮೂಲಕ ರಾಜ್ಯಾದ್ಯಂತ ಸಮೀಕ್ಷೆಯನ್ನು ಪ್ರಾರಂಭಿಸಲಾಗಿರುತ್ತದೆ.

ಸಮೀಕ್ಷಾ ಕಾರ್ಯದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಲು ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ, ದಿನಾಂಕ: 09.06.2025 ರಿಂದ ದಿನಾಂಕ: 22.06.2025 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ/ವಿಧಾನದ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗರೀಕ ಸೇವಾ ಕೇಂದ್ರಗಳಾದ, ‘ಕರ್ನಾಟಕ ಒನ್”(Karnataka one), ಬೆಂಗಳೂರು ಒನ್(Bengaluru one), ಗ್ರಾಮ ಒನ್ (Grama one), ಬಾಪೂಜಿ ಸೇವಾ ಕೇಂದ್ರಗಳು.

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಕಚೇರಿಗಳಲ್ಲಿ(BBMP ward offices) ವ್ಯವಸ್ಥೆ ಮಾಡಿಕೊಂಡಿರುವ ಪ್ರತ್ಯೇಕವಾದ ಶಿಬಿರಗಳು,

Online 2 https://schedulecastesurvey.karnataka.gov.in/selfd eclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವುದು.

ಈವರೆಗೂ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ. 91.00 ರಷ್ಟು ಪ್ರಗತಿಯನ್ನು ಸಾಧಿಸಲಾಗಿದ್ದು ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಶೇ. 50.00 ರಷ್ಟು ಪ್ರಗತಿಯಾಗಿರುತ್ತದೆ. ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಪರಿಶಿಷ್ಟ ಜಾತಿ ಕುಟುಂಬದವರಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸಮೀಕ್ಷಾ ದಿನಾಂಕವನ್ನು ದಿನಾಂಕ: 23.06.2025 ರಿಂದ ದಿನಾಂಕ: 30.06.2025 ರವರೆಗೆ ವಿಸ್ತರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular