ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ವಿವಿಧ ವೃಂದದ ಹುದ್ದೆಗಳಿಗೆ ನಡೆಸಿದ ನೇಮಕಾತಿ ಪರೀಕ್ಷೆಯ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.
ತಾಂತ್ರಿಕ ಶಿಕ್ಷಣ ಇಲಾಖೆ, ಸಣ್ಣ ಕೈಗಾರಿಕೆ ಅಭಿವೃದ್ಧಿ ಇಲಾಖೆ, ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಜಲ ಮಂಡಳಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹುದ್ದೆಗಳಿಗೆ ಫೆಬ್ರವರಿ 21, 22 ರಂದು ಪರೀಕ್ಷೆ ನಡೆಸಲಾಗಿತ್ತು.
ಅಂತಿಮ ಅಂಕಪಟ್ಟಿಯನ್ನು ಆಯಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರದಿಂದ ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

