ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯ ವಸತಿ ಶಾಲೆಗಳ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗಳ ಹಾಗೂ ಇತರೆ ವಸತಿಶಾಲೆಗಳಿಗೆ 6ನೇ ತರಗತಿಗೆ ಸೀಟು ಹಂಚಿಕೆ -2026 ರ ಸಂಬಂಧ ನಡೆಸಲಾದ ಪ್ರವೇಶ ಪರೀಕ್ಷೆಗಳ ಅಂತಿಮ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗಳು ಹಾಗೂ ಇತರೆ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ದಿನಾಂಕ 01.03.2026 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ದಿನಾಂಕ 03.03.2026 ರಂದು ಪ್ರಕಟಿಸಿ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ 07.03.2026 ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ಪರಿಷ್ಕೃತಗೊಂಡ ಕೀ ಉತ್ತರಗಳನ್ನು ದಿನಾಂಕ 07.03.2026 ರಂದು ಪ್ರಕಟಿಸಿ, ಸದರಿ ದಿನಾಂಕದಂದೇ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಿ ದಿನಾಂಕ 18.03.2026 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ನಿಗದಿತ ದಿನಾಂಕದೊಳಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂತಿಮ ಅಂಕಗಳನ್ನು ಮತ್ತು ರ್ಯಾಂಕ್ನ ಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ದಿನಾಂಕ 24.03.2026 ರಂದು ಪ್ರಕಟಿಸಲಾಗಿದೆ.
ಸಹಾಯವಾಣಿ: 080-23 460 460.
ಇ-ಮೇಲ್: [email protected]
ವೆಬ್ಸೈಟ್: http://kea.kar.nic.in


