ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) MBA, MCA, ME, M.Tech, M.Arch ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಈ ಫಲಿತಾಂಶವನ್ನು ನೋಡಿಕೊಂಡು ಅಭ್ಯರ್ಥಿಗಳು ತಮ್ಮ ಇಚ್ಛೆ/ಆಯ್ಕೆಗಳನ್ನು ಮರುಕ್ರಮಗೊಳಿಸಲು/ ಹೊಸದಾಗಿ ಸೇರಿಸಲು/ ತೆಗೆದುಹಾಕುವುದಕ್ಕೆ ಅಕ್ಟೋಬರ್ 3ರವರೆಗೆ ಅವಕಾಶ ನೀಡಲಾಗಿದೆ. ಮೊದಲ ಸುತ್ತಿನಲ್ಲಿ ದಾಖಲಿಸಿದ ಇಚ್ಛೆ/ಆಯ್ಕೆಗಳನ್ನೇ ಮುಂದಿನ ಎಲ್ಲ ಸುತ್ತುಗಳಿಗೆ ಪರಿಗಣಿಸಲಾಗುತ್ತದೆ.
ಅ.3ರಂದು ಸಂಜೆ 5ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟ. ಅ.4ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.