ಬೆಂಗಳೂರು : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ “ಅಂತಿಮ ವೇಳಾಪಟ್ಟಿ” ಯನ್ನು ಪ್ರಕಟಿಸಲಾಗಿದೆ.
ಈ ಕುರಿತು ಸುತ್ತೋಲೆ ಹೊರಡಿಸಿದ ಪರೀಕ್ಷಾ ಮಂಡಳಿ ‘ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ:04-11-2025 ರಂದು ಪ್ರಕಟಿಸಲಾಗಿದೆ’. ‘ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ” ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.’




