HomeKarnatakaಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ: ಮೌಲಾನ ಶಾಲೆಗಳಲ್ಲಿ 700 ಶಿಕ್ಷಕರ ಹುದ್ದೆ ಭರ್ತಿ

ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ: ಮೌಲಾನ ಶಾಲೆಗಳಲ್ಲಿ 700 ಶಿಕ್ಷಕರ ಹುದ್ದೆ ಭರ್ತಿ

ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯ ಅಧೀನದ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆಗಳು ಸೇರಿದಂತೆ 700 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ.

2018- 19 ನೇ ಸಾಲಿನಲ್ಲಿ ಆರಂಭಿಸಿದ 100 ಮೌಲಾನ ಆಜಾದ್ ಮಾದರಿ ಶಾಲೆಗಳಿಗೆ ಪ್ರತಿ ಶಾಲೆಗೆ 7 ಹುದ್ದೆಗಳಂತೆ ಒಟ್ಟು 700 ಹುದ್ದೆಗಳನ್ನು ಸೃಜಿಸಿ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಮುಖ್ಯೋಪಾಧ್ಯಾಯರ 100 ಹುದ್ದೆಗಳು, ಕನ್ನಡ, ಇಂಗ್ಲಿಷ್, ಉರ್ದು ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ತಲಾ 100 ಜನ ಶಿಕ್ಷಕರಂತೆ 700 ಹುದ್ದೆಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಭರ್ತಿ ಮಾಡಿಕೊಳ್ಳಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular