BIG NEWS: ಮೈಕ್ರೋ ಫೈನಾನ್ಸ್ ವಿರುದ್ಧ ಬಿಗಿ ಕ್ರಮಕ್ಕೆ ಕೇಂದ್ರ, RBI ಸಹಮತವೂ ಬೇಕು: ಎಂ.ಬಿ. ಪಾಟೀಲ್

ಶಿವಮೊಗ್ಗ: ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಸಂಬಂಧ ಸರ್ಕಾರ ಸುಗ್ರೀವಾಜ್ಞೆಯನ್ನು ನಿಶ್ಚಿತವಾಗಿ ಹೊರಡಿಸಬೇಕು. ಇದಕ್ಕೆ ಕೇಂದ್ರ ಸರ್ಕಾರ ಸಹ ಭಾಗಿಯಾಬೇಕು. ನಾನು ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಗಲೂ ಸಹ ಐಎಂಎ ಹಗರಣ ಆಗಿತ್ತು. ಈಗ ಮೈಕ್ರೋ ಫೈನಾನ್ಸ್ ಎಲ್ಲಾ ಕಡೆ ಇದೆ. ಇದು ನಿರಂತರವಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ನಾವು ಅಂತ್ಯ ಹಾಡಬೇಕು. ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನನ್ನು ತರಬೇಕಿದೆ. ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿ ಪಡಿಸಬೇಕಿದೆ ಎಂದರು.

ದುಬಾರಿ ಬಡ್ಡಿಯಿಂದಾಗಿ ಜನರು ಅವಮಾನ ಸಹಿಸದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದೆಲ್ಲಾ ಆಗಬಾರದು. ಅದಕ್ಕಾಗಿ ಆರ್‌ಬಿಐ ಸಹ ಸಹಮತ ವ್ಯಕ್ತಪಡಿಸಬೇಕು. ಅವರು ಸಹ ಸೂಕ್ತ ಕಾನೂನು ತರಬೇಕು. ಮೈಕ್ರೋ ಫೈನಾನ್ಸ್ ನ ಹಾವಳಿಗೆ ಇತಿ ಶ್ರೀ ಹಾಡಬೇಕು ಎಂದರು.

ಮೈಕ್ರೋ ಫೈನಾನ್ಸ್ ಹಾವಳಿಯಿಂದ ನೊಂದವರಿಗೆ ಸರ್ಕಾರ ನಿಶ್ವಿತವಾಗಿ ನೆರವು ನೀಡಲಿದೆ. ಇದಕ್ಕೆ ಕೇಂದ್ರ ಸರ್ಕಾರ ನೆರವು ನೀಡಬೇಕು. ಮೈಕ್ರೋ ಫೈನಾನ್ಸ್ ನವರು ಕೋರ್ಟ್ ಗೆ ಹೋಗಿ ಕಾನೂನಿನ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಕೆಲಸ ಆಗಬಾರದು. ಯಾವುದೇ ಶೋಷಣೆ ಇಲ್ಲದಂತಹ ಬಿಗುವಾದ ಕಾನೂನು ಬರಬೇಕು ಎಂದು ಆಗ್ರಹಿಸಿದರು.

ಕುಂಭಮೇಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಖರ್ಗೆ ಅವರು ಬರೀ ಆಚರಣೆಯ ಬಗ್ಗೆ ಹೇಳಿಲ್ಲ. ಕೇಂದ್ರ ಸರ್ಕಾರ ಜನರ ಕಣ್ಣೊರೆಸುವ ಕೆಲಸ ಮಾಡುತ್ತಿದೆ. ಡಾಲರ್ ಮುಂದೆ ಭಾರತದ ರೂಪಾಯಿ ಕುಸಿತ ಆಗುತ್ತಿದೆ. ಈ ಅರ್ಥದಲ್ಲಿ ಖರ್ಗೆ ಅವರು ಮಾತನಾಡಿದ್ದಾರೆ. ಆದರೆ ಬಿಜೆಪಿಯವರಿಗೆ ಇದೆಲ್ಲ ಕಾಣುವುದಿಲ್ಲ ಎಂದರು.

ಕುಂಭಮೇಳದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಪಾಟೀಲ್, ಘಟನೆಯ ಸತ್ಯಾಸತ್ಯೆಯನ್ನು ತಿಳಿದುಕೊಂಡು ಸರ್ಕಾರ ನೆರವು ನೀಡಲಿದೆ ಎಂದು ಹೇಳಿದರು.

ರಾಜ್ಯದ ಏರ್ಪೋರ್ಟ್ ಅಭಿವೃದ್ಧಿ ಬಗ್ಗೆಯೂ ವಿಸ್ತೃತ ಚರ್ಚೆಯಾಗಿದೆ. ಸುಮಾರು 1500 ಕೋಟಿ ರೂ. ಗಳಿಗೂ ಅಧಿಕ ವೆಚ್ಚದಲ್ಲಿ ನಿರ್ವಹಣೆಗೆ ಚಿಂತಿಸಲಾಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read