HomeKarnatakaBREAKING NEWS: ಫೈನಾನ್ಸ್ ಕಿರುಕುಳ: ನೊಂದ ಶಿಕ್ಷಕಿ ನದಿಗೆ ಹಾರಿ ಆತ್ಮಹತ್ಯೆ

BREAKING NEWS: ಫೈನಾನ್ಸ್ ಕಿರುಕುಳ: ನೊಂದ ಶಿಕ್ಷಕಿ ನದಿಗೆ ಹಾರಿ ಆತ್ಮಹತ್ಯೆ

ದಾವಣಗೆರೆ: ರಾಜ್ಯದಲ್ಲಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮುಂದುವರೆದಿದೆ. ಇದರಿಂದ ನೊಂದು ಜನರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಶಿಕ್ಷಕಿ ಪುಷ್ಪಲತಾ (46) ಆತ್ಮಹತ್ಯೆಗೆ ಶರಣಾದವರು. ದಾವಣಗೆರೆ ಜಿಲ್ಲೆಯ ಹೊನ್ನಳಿ ತಾಲೂಕಿನ ತುಂಗಭದ್ರಾ ನದಿಯಲ್ಲಿ ಪುಷ್ಪಲತಾ ಶವ ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಪುಷ್ಪಲತಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಇಂದು ನದಿಯಲ್ಲಿ ಶವ ಪತ್ತೆಯಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular