HomeKarnatakaBREAKING: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷದ ಮಾತ್ರೆ ನುಂಗಿ ಮಹಿಳೆ ಸಾವು

BREAKING: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷದ ಮಾತ್ರೆ ನುಂಗಿ ಮಹಿಳೆ ಸಾವು

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಮೈಕ್ರೋ ಫೈನಾನ್ಸ್ ನಿಂದ ಸಾಲ ಪಡೆದ ಜಯಶೀಲ(53) ವಿಷದ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ಘಟನೆ ನಡೆದಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಾಳದೆ ಜಯಶೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫೈವ್ ಸ್ಟಾರ್ ಸೇರಿದಂತೆ ಎರಡು ಮೈಕ್ರೋ ಫೈನಾನ್ಸ್ ಬಳಿ 5 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಮನೆ, ವ್ಯವಸಾಯ, ಹಸು ಸಾಕಾಣಿಕೆಗಾಗಿ ಜಯಶೀಲ ಸಾಲ ಮಾಡಿಕೊಂಡಿದ್ದು, ಪ್ರತಿ ತಿಂಗಳು 20 ಸಾವಿರ ರೂ. ಗೂ ಹೆಚ್ಚು ಇಎಂಐ ಪಾವತಿಸಬೇಕಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಲ ಮಾಡಿ ಖರೀದಿಸಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿದ್ದು, ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದ ಅವರು ಮನನೊಂದು ತಮ್ಮ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಲ್ಲಹಳ್ಳಿಯಿಂದ ವಿಷದ ಮಾತ್ರೆ ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular