ಬೆಂಗಳೂರು: ಮನೆಯ ಶೌಚಗುಂಡಿ ಸ್ವಚ್ಛಗೊಳಿಸಲು ಪೌರಕಾರ್ಮಿಕರ ಬಳಕೆ ಮಾಡಿದ ಆರೋಪದಲ್ಲಿ ಮನೆ ಮಾಲೀಕ ಸೇರಿ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಬೀಚನಹಳ್ಳಿಯಲ್ಲಿ ನಡೆದಿದೆ.
ಮನೆ ಮಾಲೀಕ ಶ್ರೀನಿವಾಸ್ ಸೇರಿದಂತೆ ಐವರ ವಿರುದ್ಧ ಕುದೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮನೆ ಮಾಲೀಕ ಶ್ರೀನಿವಾಸ್, ಪತ್ನಿ ವಿಜಯಲಕ್ಷ್ಮೀ, ಪುತ್ರರಾದ ಪ್ರದೀಪ್, ಕೃಷ್ಣಮೂರ್ತಿ, ವಿಜಯ್ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ.
ಯಂತ್ರದ ಬದಲು ಪೌರ ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛ ಮಾಡಿಸಿದ್ದ ಹಿನ್ನೆಲೆಯಲ್ಲಿ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.