BIG NEWS: ಅಂಬೇಡ್ಕರ್ ವಸತಿ ನಿಲಯದಲ್ಲಿ ಅನಧಿಕೃತವಾಗಿ ವಾಸ: 14 ಜನರ ವಿರುದ್ಧ FIR ದಾಖಲು

ಬೆಂಗಳೂರು: ಬಿ.ಆರ್.ಅಂಬೇಡ್ಕರ್ ವಸತಿ ನಿಲಯದಲ್ಲಿ ಅನಧಿಕೃತವಾಗಿ ವಾಸವಾಗಿರುವ ಆರೋಪದಲ್ಲಿ 14ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಬೆಂಗಳೂರಿನ ಶ್ರೀಗಂಧದಕಾವಲ್ ನಲ್ಲಿರುವ ಬಿ.ಆರ್.ಅಂಬೇಡ್ಕರ್ ವಸತಿ ನಿಲಯದಲ್ಲಿ ಕೆಲವರು ಅನಧಿಕೃತವಾಗಿ ವಾಸವಾಗಿದ್ದಾರೆ ಎಂದು ವಿಚಕ್ಷಣಾ ದಳದ ಅಧಿಕಾರಿ ಎಂ.ರಾಜ್ರ‍್ಶ್ ಜಯಸಿಂಹನ್ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ವಾರ್ಡನ್ ಗಳಾದ ಮಂಜುನಾಥ್, ವಿಜಯ್ ಕುಮಾರ್ ಹಾಗೂ ವಿದ್ಯಾರ್ಥಿಗಳಾದ ಮನೋಹರ್, ಅರುಣ್ ಕುಮಾರ್, ಶ್ರೀಕಾಂತ್, ಗಣೇಶ್, ಜಯರಾಜ್, ರಘು, ಅಂಜನಪ್ಪ, ಸಂದೇಶ್, ಜೀವರರತ್ನಂ, ನರೇಂದ್ರ, ಸಾಗರ್, ಕಾರ್ತಿಕ್ ನಾಯಕ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read