HomeKarnatakaBIG NEWS: ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್

BIG NEWS: ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸೋಮವಾರ ಮಂಗಳೂರಿನ ಕಾವೂರಿನಲ್ಲಿ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಭರತ್ ಶೆಟ್ಟಿ, ಹಿಂದೂ ಧರ್ಮದ ವಿರುದ್ಧ ಮಾತನಾಡಿರುವ ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆಯೇ ಕೆನ್ನೆಗೆ ಬಾರಿಸಬೇಕಿತ್ತು. ಅಲ್ಲದೆ ಶಿವನ ಫೋಟೋ ಹಿಡಿದು ನಿಂತಿದ್ದ ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಆತ ಸುಟ್ಟು ಬೂದಿಯಾಗುತ್ತಾನೆ ಎಂದೇ ಗೊತ್ತಿಲ್ಲವೆಂದು ನಾಲಿಗೆ ಹರಿಹಾಯ್ದಿದ್ದರು.

ಈ ಹಿನ್ನೆಲೆಯಲ್ಲಿ ಸ್ಥಳೀಯ ಕಾರ್ಪೊರೇಟರ್ ಅನಿಲ್ ಕುಮಾರ್ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಭಾರತೀಯ ದಂಡ ಸಂಹಿತೆ 353(3) ಮತ್ತು 353 ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular