‘ಡೈರಿ ಆಫ್ ವೆಸ್ಟ್ ಬೆಂಗಾಲ್’ ಚಿತ್ರದ ಟ್ರೇಲರ್ ವಿವಾದ; ಚಿತ್ರ ನಿರ್ಮಾಪಕ, ನಿರ್ದೇಶಕರಿಗೆ ನೋಟಿಸ್

‘ಡೈರಿ ಆಫ್ ವೆಸ್ಟ್ ಬೆಂಗಾಲ್’ ಚಿತ್ರದ ಟ್ರೇಲರ್ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿ ಕೋಲ್ಕತ್ತಾ ಪೊಲೀಸರು ಶನಿವಾರ ಚಿತ್ರದ ನಿರ್ಮಾಪಕ ಮತ್ತು ನಿರ್ದೇಶಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಅಮ್ಹೆರ್ಸ್ಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೇ 30 ರಂದು ಪ್ರಕರಣದ ತನಿಖಾ ಅಧಿಕಾರಿ (ಐಒ) ಮುಂದೆ ಹಾಜರಾಗುವಂತೆ ನಿರ್ದೇಶಕ ಸನೋಜ್ ಮಿಶ್ರಾ ಅವರಿಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ.

ಐಪಿಸಿ ಸೆಕ್ಷನ್‌ಗಳು, ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಮತ್ತು ಸೆಕ್ಷನ್ 7, ಸಿನಿಮಾಟೋಗ್ರಾಫ್ ಆಕ್ಟ್ 1952 ರ ಅಡಿ ಕೇಸ್ ದಾಖಲಿಸಿದ್ದು ನಿರ್ದೇಶಕರಿಗೆ ಕಾನೂನು ನೋಟಿಸ್ ಕಳುಹಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ರೋಹಿಂಗ್ಯಾಗಳು, ಮೂಲಭೂತ ಬಾಂಗ್ಲಾದೇಶಿಗಳ ವಲಸೆ ಮತ್ತು ಕೋಮುಗಲಭೆಗಳ ಬಗ್ಗೆ ಚಿತ್ರದ ಟ್ರೇಲರ್ ಹೇಳಿದೆ.

ಮುಂದಿನ ಕ್ರಮವನ್ನು ನಿರ್ಧರಿಸಲು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇನೆ ಎಂದು ಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read