HomeAutoವಾಹನ ಸವಾರರೇ ಗಮನಿಸಿ: ಆ. 1 ರಿಂದ ಅತಿ ವೇಗದ ವಾಹನ ಚಾಲನೆ ವಿರುದ್ಧ ಎಫ್ಐಆರ್:...

ವಾಹನ ಸವಾರರೇ ಗಮನಿಸಿ: ಆ. 1 ರಿಂದ ಅತಿ ವೇಗದ ವಾಹನ ಚಾಲನೆ ವಿರುದ್ಧ ಎಫ್ಐಆರ್: 2 ಸಾವಿರ ದಂಡ, 6 ತಿಂಗಳು ಜೈಲು

ಬೆಂಗಳೂರು: ಅತಿ ವೇಗದ ವಾಹನ ಸಂಚಾರಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಆಗಸ್ಟ್ 1ರಿಂದ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು.

ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು. ರಾಜ್ಯಾದ್ಯಂತ 130 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ವಾಹನ ಚಾಲನೆ ಮಾಡಿದಲ್ಲಿ ಎಫ್ಐಆರ್ ದಾಖಲಿಸಲಾಗುವುದು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಈ ರೀತಿಯ ಪ್ರಕರಣಗಳಲ್ಲಿ ಎರಡು ಸಾವಿರ ರೂಪಾಯಿವರೆಗೆ ದಂಡ ಅಥವಾ ಆರು ತಿಂಗಳು ಜೈಲು ಶಿಕ್ಷೆ ವಿಧಿಸಬಹುದಾಗಿದೆ. ವೇಗದ ಸಂಚಾರಕ್ಕೆ ಕಡಿವಾಣ ಹಾಕಲು ಈ ಕ್ರಮ ಕೈಗೊಳ್ಳಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular