HomeKarnatakaBREAKING: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು

BREAKING: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು

ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆ ದೂರು ನೀಡಿದ್ದು, ಅರುಣ್ ಕುಮಾರ್ ಪುತ್ತಿಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿದ್ದಾರೆ.

2023ರಲ್ಲಿ ಬೆಂಗಳೂರಿನ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಫೋಟೋ, ಸೆಲ್ಫಿ, ವಿಡಿಯೋ ಮಾಡಿದ್ದಾರೆ. ಅವುಗಳನ್ನು ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಹಿಂದುತ್ವದ ಹೆಸರಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅಭಿಮಾನಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪರಿಚಿತರಾಗಿದ್ದು, ನಂತರ ಬೆಂಗಳೂರಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular