ಬೆಂಗಳೂರು: ಕಂದಾಯ ಸಚಿವ ಕೃಷ್ಣ ಭೈರೇಗೌಡ ನಾಪತ್ತೆ ಎಂದು ಪೋಸ್ಟರ್ ಅಂಟಿಸಿದ್ದವರ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಬ್ಯಾಟರಾಯನಪುರ ವಾರ್ಡ್ ಅಸಿಸ್ಟೆಂಟ್ ಇಂಜಿನಿಯರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೋಸ್ಟರ್ ಅಭಿಯಾನ ನಡೆಸಿದ್ದವರ ವಿರುದ್ಧ ಎಫ್ ಐ ಅರ್ ದಾಖಲಾಗಿದೆ. ರಸ್ತೆ ಬದಿ ಭಿತ್ತಿ ಪತ್ರ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತರಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿತ್ತು. ಇಂಜಿನಿಯರ್ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ಕಂದಾಯ ಸಚಿವ ಕೃಷ್ಣ ಭೈರೇಗೌಡ ನಾಪತ್ತೆಯಾಗಿದ್ದಾರೆ ಎಂದು ಶನಿವಾರ ಬ್ಯಾಟರಾಯನಪುರದಲ್ಲಿ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ನಡೆಸಿದ್ದರು. ಗೋಡೆಗಳಿಗೆ ಭಿತ್ತಿ ಪತ್ರಗಳನ್ನು ಅಂಟಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

