BIG NEWS: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯತ್ರಿ ವಿರುದ್ಧ FIR ದಾಖಲು

ಬೆಂಗಳೂರು: ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯತ್ರಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಜಾನಪದ ಕಲಾವಿದ ಜೋಗಿಲ ಸಿದ್ದಾರಾಜು ಅವರಿಗೆ ಜಾತಿನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದಡಿ ಕೆ.ಎಂ.ಗಾಯತ್ರಿ ವಿರುದ್ಧ ಬೆಂಗಳುರಿನ ಜೆ.ಪಿ. ಪಾರ್ಕ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಮೂರು ವರ್ಷಗಳಿಂದ ಬಾಕಿಯಿರುವ ಪ್ರಾಯೋಜಿತ ತಂಡಗಳ ಸಂಭಾವನೆ ಕೇಳಿದ್ದಕ್ಕೆ ಜಾತಿ ನಿಂದನೆ ಮಾಡಿ, ಮೊಬೈಲ್ ಕಸಿದು ಹಲ್ಲೆ ನಡೆಸಿದ್ದಾಗಿ ಜೋಗಿಲ ಸಿದ್ದರಾಜು ಆರೋಪಿಸಿದ್ದಾರೆ. ಇದೇ ವಿಚಾರವಾಗಿ ಸಂಧಾನ ಸಭೆ ಕರೆಯಲಾಗಿತ್ತು. ಸಭೆಗೆ ಗಾಯತ್ರಿ ಗೈರು ಹಾಜರಾಗಿದರು. ಮುಖ್ಯಮಂತ್ರಿಗಳಿಗೂ ಈ ಬಗ್ಗೆ ದೂರು ನೀಡಿರುವ ಜೋಗಿಲ ಸಿದ್ದರಾಜು ಜೆ.ಪಿ.ಪಾರ್ಕ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆ.ಎಂ.ಗಾಯತ್ರಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read