HomeLatest Newsದೈವಕ್ಕೆ ಅಪಮಾನ ಮಾಡಿದ ಆರೋಪ: ನಟ ರಣವೀರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲು

ದೈವಕ್ಕೆ ಅಪಮಾನ ಮಾಡಿದ ಆರೋಪ: ನಟ ರಣವೀರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಕರಾವಳಿ ತುಳುನಾಡಿನ ದೈವಕ್ಕೆ ಅಪಮಾನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ನಗರದ ಒಂದನೇ ಎಸಿಜೆಎಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ನಟ ರಣವೀರ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ರಣವೀರ್ ಸಿಂಗ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ಕೋರಿ ವಕೀಲ ಪ್ರಶಾಂತ್ ಮೆಥಾಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿತ ನಟನ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದೆ. ಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ನಟ ರಣವೀರ್ ಸಿಂಗ್ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಗೋವಾದಲ್ಲಿ ನಡೆದ ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅವರ ನಟನೆಯನ್ನು ಹೊಗಳಲು ಮುಂದಾಗಿ ರಣವೀರ್ ಸಿಂಗ್ ಅವರು ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಕರೆದಿದ್ದಾರೆ ಎಂದು ತುಳುನಾಡಿನ ಜನರು ಮತ್ತು ದೈವಾರಾಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ನಂತರ ರಣವೀರ್ ಸಿಂಗ್ ಕ್ಷಮೆ ಕೇಳಿದ್ದಾರೆ. ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular