BIG NEWS : BJP ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ‘FIR’ ದಾಖಲು

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ರಾಹುಲ್ ಗಾಂಧಿ ವಿರುದ್ಧ ಅಮಿತ್ ಮಾಳವಿಯ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಮಾಜಿ ಶಾಸಕ ರಮೇಶ್‌ ಬಾಬು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಸಾಮಾಜಿಕ ಜಾಲತಾಣಗಳನ್ನು ಸುಳ್ಳು ಸುದ್ಧಿ ಹರಡಲೆಂದೇ ಬಳಸುತ್ತಿದ್ದ, ರಾಹುಲ್ ಗಾಂಧಿಯವರ ಕುರಿತು ಸುಳ್ಳು ಜನಾಭಿಪ್ರಾಯ ಸೃಷ್ಠಿಸಲು ನೆಲದ ಕಾನೂನಿನ ಬಗ್ಗೆ ಗೌರವವೇ ಇಲ್ಲದಂತೆ ಟ್ವಿಟರ್ ನಲ್ಲಿ ಸುಳ್ಳು ವೀಡಿಯೋ ಹರಿಬಿಟ್ಟಿದ್ದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ವಿರುದ್ದ 17 ಜೂನ್ 2023ರಂದು ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಿಸಿದ್ದ ದೂರಿನ ಮೇಲೆ ಪೋಲೀಸರು FIR ದಾಖಲಿಸಿದ್ದಾರೆ.

ಹೈಗ್ರೌಂಡ್ಸ್ ಠಾಣೆ ಪೊಲೀಸರು ಅಮಿತ್ ಮಾಳವಿಯ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read