BREAKING : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ‘FIR’ ದಾಖಲು

ಬೆಂಗಳೂರು : ಅಕ್ರಮವಾಗಿ ಜಿಲೆಟಿನ್ ಸ್ಪೋಟ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಅನುಮತಿ ಪಡೆಯದೇ ಅಕ್ರಮವಾಗಿ ಜಿಲೆಟಿನ್ ಸ್ಪೋಟ ಆರೋಪದಡಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ಆರ್ ಆರ್ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹುಣಸಮಾರನಹಳ್ಳಿ ಜಮೀನಿನಲ್ಲಿ ಜು.10 ರಂದು ಜಿಲೆಟಿನ್ ಸ್ಪೋಟ ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ನೀಡಿದ ದೂರಿನ ಹಿನ್ನೆಲೆ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read