HomeKarnatakaಮೊಳೆಗಳ ಜೋಡಿಸಿದ 5 ಸಿಲಿಂಡರ್ ಬಾಂಬ್ ಸ್ಪೋಟಿಸುವುದಾಗಿ ಶಿವಮೊಗ್ಗ ಕೋರ್ಟ್ ಗೆ ಬೆದರಿಕೆ: ಎಫ್ಐಆರ್ ದಾಖಲು

ಮೊಳೆಗಳ ಜೋಡಿಸಿದ 5 ಸಿಲಿಂಡರ್ ಬಾಂಬ್ ಸ್ಪೋಟಿಸುವುದಾಗಿ ಶಿವಮೊಗ್ಗ ಕೋರ್ಟ್ ಗೆ ಬೆದರಿಕೆ: ಎಫ್ಐಆರ್ ದಾಖಲು

ಶಿವಮೊಗ್ಗ: ನಗರದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಅಜ್ಮಲ್ ಕಸಬ್ ಎಂಬಾತನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ಬುಧವಾರ ನ್ಯಾಯಾಲಯ ಆವರಣದಲ್ಲಿ ಮಧ್ಯಾಹ್ನ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಭದ್ರತಾ ಸಿಬ್ಬಂದಿ, ಶ್ವಾನದಳ ಹಾಗೂ ವಿಧ್ವಂಸಕ ಕೃತ್ಯಗಳ ವಿರೋಧಿ ತಪಾಸಣಾ ತಂಡದಿAದ ವ್ಯಾಪಕ ತಪಾಸಣೆ ನಡೆಸಲಾಯಿತು.

ಮಂಗಳವಾರ ಮಧ್ಯರಾತ್ರಿ 1- 37 ಗಂಟೆಗೆ ನ್ಯಾಯಾಲಯದ ಇ ಮೇಲ್ ಗೆ ಬಂದಿದ್ದ ಬೆದರಿಕೆ ಸಂದೇಶದಿAದ ಬುಧವಾರ ಬೆಳಗ್ಗೆಯಿಂದಲೇ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರಲ್ಲಿ ಆತಂಕಕ್ಕೆ ಒಳಗಾಗುವಂತಾದರು. ಈ ಹಿನ್ನೆಲೆಯಲ್ಲಿಯೇ ಭದ್ರತಾ ಸಿಬ್ಬಂದಿ, ಶ್ವಾನದಳ ಹಾಗೂ ವಿಧ್ವಂಸಕ ಕೃತ್ಯಗಳ ವಿರೋಧಿ ತಪಾಸಣಾದ ತಂಡದಿAದ ವ್ಯಾಪಕ ತಪಾಸಣೆಯಿಂದ ಇದೊಂದು ಹುಸಿ ಕರೆ ಎಂದು ಗೊತ್ತಾದ ಮೇಲೆ ನ್ಯಾಯಾಲಯದಲ್ಲಿನ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ನಿಟ್ಟುಸಿರುವ ಬಿಡುವಮತಾಯಿತು.

ಇ ಮೇಲ್ ಮೂಲಕ ಬಂದಿದ್ದ ಬಾಂಬ್ ಸ್ಪೋಟದ ಬೆದರಿಕೆಯ ಕುರಿತು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ಜಿ.ಈ. ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ, ಮಂಗಳವಾರ ತಡ ರಾತ್ರಿ 1-37ಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಕಚೇರಿಯ ಅಧಿಕೃತ ಇ-ಮೇಲ್ ವಿಳಾಸಕ್ಕೆ ಅಜ್ಮಲ್ ಕಸಬ್ ಎಂಬ ವ್ಯಕ್ತಿಯಿಂದ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ ಬಂದಿದೆ. ನಿರ್ದಿಷ್ಟ ಸಮಯದಲ್ಲಿ ನ್ಯಾಯಾಲಯ ಆವರಣದಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿತ್ತು. ತಕ್ಷಣವೇ ಈ ವಿಚಾರವನ್ನು ಜಿಲ್ಲಾ ಪೊಲೀಸ್ ಇಲಾಖೆಯ ಗಮನಕ್ಕೆ ತರಲಾಯಿತು’ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಹಿರಿಯ ಶಿರಸ್ತೇದಾರರು ಮತ್ತು ಆಡಳಿತಾಧಿಕಾರಿಗಳು ಜಯನಗರ ಪೊಲೀಸ್ ಠಾಣೆಯಲ್ಲಿ ‘ಉದಯನಿಧಿ ಸ್ಟಾಲಿನ್ ಅವರನ್ನು ಬೆಂಬಲಿಸಲು ಚೆನ್ನೆöÊ ಪತ್ರಕರ್ತರಿಗೆ ಅಪ್ರಾಪ್ತ ಹುಡುಗಿಯರನ್ನು ಸರಬರಾಜು ಮಾಡಲಾಗಿದ್ದು, ಅವರ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ತುಕ್ಕು ಹಿಡಿದ ಮೊಳೆಗಳನ್ನು ಜೋಡಿಸಲಾದ 5 ಮಿನಿ ಗ್ಯಾಸ್ ಸಿಲಿಂಡರ್ ಬಾಂಬ್ ಗಳು ಮಧ್ಯಾಹ್ನ 2.30ಕ್ಕೆ ನಿಮ್ಮ ನ್ಯಾಯಾಲಯದಲ್ಲಿ ಸ್ಪೋಟಗೊಳ್ಳುತ್ತವೆ ಎಂದು ಇ ಮೇಲ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ದೂರು ದಾಖಲಿಸಿ ರಕ್ಷಣೆ ನೀಡುವಂತೆ ಕೋರಿದ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಿದ ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಯು ಸ್ಳಳಕ್ಕೆ ಆಗಮಿಸಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿದರು.

ಆನಂತರ ಶ್ವಾನದಳ ಹಾಗೂ ವಿಧ್ವಂಸಕ ಕೃತ್ಯಗಳ ವಿರೋಧಿ ತಪಾಸಣಾದ ತಂಡವನ್ನು ಸ್ಥಳಕ್ಕೆ ಕರೆಸಿ ನ್ಯಾಯಾಲಯದ ಕಟ್ಟಡ, ನ್ಯಾಯಾಂಗ ಕೊಠಡಿಗಳು, ವಾಹನ ನಿಲುಗಡೆ ಪ್ರದೇಶ, ಕ್ಯಾಂಟೀನ್ ಗಳು ಹಾಗೂ ಸಾರ್ವಜನಿಕರು ಸಂಚರಿಸುವ ಸ್ಥಳಗಳಲ್ಲಿ ಸಮಗ್ರ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸ್ಫೋಟಕ ಪತ್ತೆಯಾಗಲಿಲ್ಲ. ಹಾಗಾಗಿ ಇದೊಂದು ಹುಸಿಬಾಂಬ್ ಬೆದರಿಕೆ ಎನ್ನುವುದು ಗೊತ್ತಾಯಿತು.

ಈ ವೇಳೆ ತಪಾಸಣೆ ನಂತರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಲಯದ ಆಡಳಿತಾಧಿಕಾರಿಗಳು ದೂರು ನೀಡಿದ ತಕ್ಷಣವೇ ನಾವು ನಮ್ಮ ಸಿಬ್ಬಂದಿಯೊAದಿಗೆ ನ್ಯಾಯಾಲಯಕ್ಕೆ ಬಿಗಿ ಭದ್ರತೆ ಒದಗಿಸಲಾಯಿತು. ಆ ನಂತರ ಶ್ವಾನದಳ ಹಾಗೂ ವಿಧ್ವಂಸಕ ಕೃತ್ಯಗಳ ವಿರೋಧಿ ತಪಾಸಣಾದ ತಂಡವನ್ನು ಸ್ಥಳಕ್ಕೆ ಕರೆಸಿ ನ್ಯಾಯಾಲಯದ ಹೊರಗೆ ಎಲ್ಲಾ ಕೊಠಡಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. ಆದರೂ ಎಲ್ಲಿಯೂ ಸ್ಪೋಟಕದ ಯಾವುದೇ ವಸ್ತುಗಳು ಸಿಕ್ಕಿಲ್ಲ. ಆದರೂ ಈಗ ನ್ಯಾಯಾಲಯಕ್ಕೆ ಭದ್ರತೆ ಒದಗಿಸಲಾಗಿದೆ. ಸಂಜೆವರೆಗೆ ಹೆಚ್ಚಿನ ಸಿಬ್ಬಂದಿ ಇಲ್ಲಿರಲಿದೆ ಎಂದರು.

ಆದರೂ ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ನ್ಯಾಯಾಲಯಗಳಿಗೆ ಇದೇ ಮಾದರಿಯ ಬೆದರಿಕೆ ಸಂದೇಶಗಳು ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ ಧಾರವಾಡದಲ್ಲಿರುವ ಹಾಗೂ ಸುಮಾರು ಎರಡು ತಿಂಗಳ ಹಿಂದೆ ಶಿವಮೊಗ್ಗದ ಸಿವಿಲ್ ನ್ಯಾಯಾಲಯಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular