ದ್ವೇಷ ಭಾಷಣ ಆರೋಪದಡಿ ಪ್ರಾಧ್ಯಾಪಕನ ವಿರುದ್ಧ ಕೇಸ್ ದಾಖಲು, ಕೆಲಸದಿಂದ ವಜಾ: ಪ್ರತಿಭಟನೆಗೆ ಕರೆ ನೀಡಿದ VHP

ಮಂಗಳೂರು ದ್ವೇಷ ಭಾಷಣ ಆರೋಪದದಿ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರುಣ್ ಉಳ್ಳಾಲ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದನ್ನು ಖಂಡಿಸಿ ಅಕ್ಟೋಬರ್ 15 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಹೆಚ್‌ಪಿ ಮುಖಂಡ ಶಿವಾನಂದ ಮೆಂಡನ್ ಹಿಂದೂಗಳನ್ನು ಗುರಿಯಾಗಿಸಿಕೊಂಡು ಅರುಣ್ ಉಳ್ಳಾಲ ವಿರುದ್ಧ ಕೇಸು ದಾಖಲಾಗಿದೆ. ಅವರ ಪರವಾಗಿ ವಿಹೆಚ್‌ಪಿ ನಿಲ್ಲಲಿದೆ ಎಂದು ಹೇಳಿದ್ದಾರೆ.

ಡಾ. ಅರುಣ್ ತಮ್ಮ ಬಿಡುವಿನ ವೇಳೆಯಲ್ಲಿ ಅರುಣ್ ಧರ್ಮ ಶಿಕ್ಷಣ ನೀಡುತ್ತಿದ್ದರು. ಅವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಸಂತ ಆಗ್ನೇಸ್ ಶಿಕ್ಷಣ ಸಂಸ್ಥೆಯಿಂದ ವಜಾ ಮಾಡಲಾಗಿದೆ. ಇದೇ ರೀತಿ ಹಿಂದೂ ಉಪನ್ಯಾಸಕರನ್ನು ಆಗ್ನೇಸ್ ಶಿಕ್ಷಣ ಮಂಡಳಿ ವಜಾ ಮಾಡಿದ್ದು, ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳಿಗೆ ನ್ಯಾಯ ಸಿಗುತ್ತಿಲ್ಲ. ರಾಜ್ಯಪಾಲರ ವಿರುದ್ಧ ಬಾಂಗ್ಲಾ ಮಾದರಿ ದಾಳಿ ನಡೆಸುವುದಾಗಿ ಹೇಳಿದ್ದ ಎಂಎಲ್ಸಿ ಐವನ್ ಡಿಸೋಜಾ ವಿರುದ್ಧ ಇದುವರೆಗೂ ಪ್ರಕರಣ ದಾಖಲಿಸಿಲ್ಲ. ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read