HomeKarnatakaBREAKING: ನಾಗಮಂಗಲ ಗಲಭೆ ಪ್ರಕರಣ: ಕೇಂದ್ರ ಸಚಿವೆ ಶೋಭಾ, ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ...

BREAKING: ನಾಗಮಂಗಲ ಗಲಭೆ ಪ್ರಕರಣ: ಕೇಂದ್ರ ಸಚಿವೆ ಶೋಭಾ, ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಫ್ಐಆರ್ ದಾಖಲು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕೋಮುಗಲಭೆ ಸಂಬಂಧ ಸುಳ್ಳು ಮಾಹಿತಿ ಹಂಚಿಕೆ ಆರೋಪದಡಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ನಾಗಮಂಗಲ ಘಟನೆಗೆ ಸಂಬಂಧಿಸಿದ ವಿಡಿಯೋ, ಫೋಟೋಗಳನ್ನು ಜಾಲತಾಣದಲ್ಲಿ ಪೋಸ್ಟ್ ಹಿನ್ನೆಲೆಯಲ್ಲಿ ದೊಂಬಿ, ಗಲಭೆಗೆ ಪ್ರಚೋದನೆ ಆರೋಪದಡಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಮಂಡ್ಯ ಜಿಲ್ಲೆಯ ನಾಗಮಂಗಲ ಟೌನ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular