ಕಲಬುರಗಿ: ‘ಕಾಮಿಡಿ ಕಿಲಾಡಿಗಳು’ ಜಾತಿಯ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ.
ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಯನಾ ವಿರುದ್ಧ ಕೇಸ್ ದಾಖಲಿಸಲಾಗಿದೆ. ದಲಿತ ಸಮುದಾಯಕ್ಕೆ ಅವಮಾನ ಮಾಡಿದ ಆರೋಪದಡಿ ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ದೂರು ನೀಡಿದ್ದರು.
ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ ನಯನಾ ದಲಿತ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಸಿ ನಿಂದಿಸಿದ್ದರು ಎಂದು ಹೇಳಲಾಗಿದೆ. ನಯನಾ ಹೇಳಿಕೆ ಕುರಿತಾಗಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ನಂತರದಲ್ಲಿ ಅವರು ಕ್ಷಮೆ ಕೂಡ ಕೇಳಿದ್ದರು. ಇದೀಗ ಅವರ ವಿರುದ್ಧ ಕೇಸ್ ದಾಖಲಾಗಿದೆ.
