BREAKING : ಪರಪ್ಪನ ಅಗ್ರಹಾರ ಜೈಲಲ್ಲಿ ‘ಮದ್ಯ’ ಸೇವಿಸಿ ಡ್ಯಾನ್ಸ್ : ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ‘FIR’ ದಾಖಲು.!

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಲ್ಲಿ ಮದ್ಯ ಸೇವಿಸಿ ಡ್ಯಾನ್ಸ್ ಮಾಡಿದ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಧನಂಜಯ್, ಮಂಜುನಾಥ ಅಲಿಯಾಸ್ ಕೋಳಿ ಮಂಜ, ಚರಣ್ ರಾವ್, ಕಾರ್ತಿಕ್ ಸೇರಿ ನಾಲ್ವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ವಿಚಾರಣಾ ಕೈದಿಗಳು ಕೊಠಡಿ ಸಂಖ್ಯೆ 7 ರಲ್ಲಿ ಡ್ಯಾನ್ಸ್ ಮಾಡಿದ್ದರು. ಜೈಲಿನೊಳಗೆ ನಿಷೇಧಿತ ವಸ್ತುಗಳು ಕೂಡ ಪತ್ತೆಯಾಗಿತ್ತು.

ಜೈಲಿನೊಳಗೆ ಮೊಬೈಲ್ ತಂದಿದ್ದು ಯಾರು..? ಇದನ್ನು ಚಿತ್ರೀಕರಿಸಿದ್ದು ಯಾರು ಎಂಬುದನ್ನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಲ್ಲಿ ಡ್ಯಾನ್ಸ್ ಮಾಡಿದ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read