HomeLatest Newsಮೆಟ್ರೋ ಸಂಚಾರಕ್ಕೆ ಅಡ್ಡಿ: ಪ್ರಯಾಣಿಕರ ವಿರುದ್ಧ ಎಫ್ಐಆರ್ ದಾಖಲು

ಮೆಟ್ರೋ ಸಂಚಾರಕ್ಕೆ ಅಡ್ಡಿ: ಪ್ರಯಾಣಿಕರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ನಗರದ ಆರ್.ವಿ. ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗದ ರೈಲಿನ ಸಂಚಾರವನ್ನು ನಿಗದಿತ ಅವಧಿಗಿಂತ ಮೊದಲೇ ಆರಂಭಿಸುವಂತೆ ಒತ್ತಾಯಿಸಿ 15 ಜನರ ಗುಂಪು ರೈಲನ್ನು ತಡೆದು ಗಲಾಟೆ ಮಾಡಿದ ಘಟನೆ ಸೋಮವಾರ ನಡೆದಿದೆ.

ಇದರಿಂದ ರಾಷ್ಟ್ರೀಯ ವಿದ್ಯಾಲಯ ಹಳದಿ ಮೆಟ್ರೋ ನಿಲ್ದಾಣದಿಂದ ಬೆಳಗ್ಗೆ 6 ಗಂಟೆಗೆ ಹೊರಡಬೇಕಿದ್ದ ರೈಲು 6.30ಕ್ಕೆ ಹೊರಟಿದೆ. ಹಳದಿ ಮಾರ್ಗದ ಉಳಿದ ಪ್ರಯಾಣಿಕರು ತೊಂದರೆಗೀಡಾಗಿದ್ದು, ರೈಲು ತಡೆದ ಗುಂಪಿನ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮದ ವತಿಯಿಂದ ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಪ್ರತಿದಿನ ಹಸಿರು ಮತ್ತು ನೇರಳೆ ಮಾರ್ಗದ ರೈಲುಗಳ ಸೇವೆ ಬೆಳಗ್ಗೆ 5 ಗಂಟೆಗೆ ಆರಂಭವಾಗುತ್ತದೆ. ಹಳದಿ ಮಾರ್ಗದ ರೈಲು ಸೇವೆ 6 ಗಂಟೆಗೆ ಶುರುವಾಗುತ್ತದೆ. ಇದರಿಂದ ಎರಡು ರೈಲುಗಳಲ್ಲಿ ಬಂದ ಪ್ರಯಾಣಿಕರು ಹಳದಿ ಮಾರ್ಗದ ರೈಲಲ್ಲಿ ಸಂಚರಿಸಲು ಹೆಚ್ಚಿನ ಸಮಯ ಕಾಯಬೇಕು ಎಂದು ಪ್ರಯಾಣಿಕರು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಕಾರಣಕ್ಕೆ ಹಸಿರು ಮಾರ್ಗದ ಮೂಲಕ ಬಂದ ಪ್ರಯಾಣಿಕರ ಪೈಕಿ ಸುಮಾರು 15 ಜನ ಹಳದಿ ಮಾರ್ಗದಲ್ಲಿ ಬೆಳಗ್ಗೆ 5:55 ಕ್ಕೆ ರೈಲು ಆಗಮಿಸಿ 6 ಗಂಟೆಗೆ ಹೊರಡಲು ಅನುವಾಗುತ್ತಲೇ ಅಡ್ಡಿಪಡಿಸಿದ್ದಾರೆ. ರೈಲು ಆಪರೇಟರ್, ಸ್ಟೇಷನ್ ನಿಯಂತ್ರಕರು, ಭದ್ರತಾ ಸಿಬ್ಬಂದಿ ಮನವೊಲಿಸಲು ಪ್ರಯತ್ನಿಸಿದರೂ ಮಾತು ಕೇಳಿಲ್ಲ. ಅಂತಿಮವಾಗಿ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಮೆಟ್ರೋ ರೈಲು ವಿಳಂಬ ಖಂಡಿಸಿ ರೈಲು ತಡೆದಿದ್ದ ಹಿನ್ನೆಲೆಯಲ್ಲಿ ರೈಲು ತಡೆದಿದ್ದ ಪ್ರಯಾಣಿಕರ ವಿರುದ್ಧ ಕೇಸು ದಾಖಲಾಗಿದೆ. ಜಯನಗರ ಪೊಲೀಸ್ ಠಾಣೆಗೆ ಬಿಎಂಆರ್‌ಸಿಎಲ್ ಅಧಿಕಾರಿಗಳು ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular