ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರುದ್ಧ ಎಫ್ ಐ ಆರ್ (FIR) ದಾಖಲಾಗಿದೆ. ಮುಂಬೈ ನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
3.15 ಕೋಟಿ ಹಣ ವಂಚನೆ ಆರೋಪದಡಿ ಸಿನಿಮಾ ನಿರ್ದೇಶಕ ರಾಘವೇಂದ್ರ ಹೆಗಡೆ ಅವರು ಧ್ರುವ ಸರ್ಜಾ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೊಸ ಸಿನಿಮಾದ ಶೂಟಿಂಗ್ ಗೆ ಬರುವುದಾಗಿ 3.15 ಕೋಟಿ ಅಡ್ವಾನ್ಸ್ ಹಣ ಪಡೆದು ಶೂಟಿಂಗ್ ಗೆ ಬರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.