ವಿದ್ಯಾರ್ಥಿಗೆ ಜಾತಿ ನಿಂದನೆ ಆರೋಪ: ಕುಲಪತಿ, ಕುಲಸಚಿವರ ವಿರುದ್ಧ ಎಫ್ಐಆರ್

ಕಲಬರಗಿ: ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿ ಕುಲಪತಿ, ಕುಲ ಸಚಿವರು ಭದ್ರತಾ ಅಧಿಕಾರಿ ವಿರುದ್ಧ ನರೋಣಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ನಂದಪ್ಪ ಪರಮಣ್ಣ ಅವರನ್ನು ಗೇಟಿನಲ್ಲೇ ತಡೆದು ಜಾತಿ ಹೆಸರಿನಿಂದ ನಿಂದಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ನಂದಪ್ಪ ಅವರಿಗೆ ಕನ್ನಡ ವಿಭಾಗದ ವತಿಯಿಂದ ಗುರುವಾರ ಬೀಳ್ಕೊಡುಗೆ ಏರ್ಪಡಿಸಲಾಗಿತ್ತು. ಇದಕ್ಕಾಗಿ ಅವರು ವಿವಿಗೆ ಆಗಮಿಸಿದಾಗ ಮುಖ್ಯದ್ವಾರದಲ್ಲಿಯೇ ತಡೆಯಲಾಗಿದೆ.

ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ಕುಲಸಚಿವ ಪ್ರೊ. ಆರ್. ಆರ್. ಬಿರಾದಾರ ಅವರ ನಿರ್ದೇಶನದ ಮೇರೆಗೆ ಒಳಗೆ ಬಿಡುತ್ತಿಲ್ಲ ಎಂದು ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಈ ಹಿಂದೆಯೂ ಪರಿಶಿಷ್ಟ ಜಾತಿಗೆ ಸೇರಿದವನು ಎಂಬ ಕಾರಣಕ್ಕೆ ಕಿರುಕುಳ ನೀಡಿದ್ದಾಗಿ ನಂದಪ್ಪ ದೂರು ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read