ಬೆಂಗಳೂರು: ಕಸಕ್ಕೆ ಹಾಕಿದ್ದ ಬೆಂಕಿಯಿಂದ ಪಕ್ಕದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿಯ ಕಿಡಿ ತಗುಲಿ ಭಾರಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಕಂಟೋನ್ಮೆಂಟ್ ರಸ್ತೆಯಲ್ಲಿ ನಡೆದಿದೆ.
ಕಸಕ್ಕೆ ಹಕ್ಕಿದ್ದ ಬೆಂಕಿಯಿಂದಾಗಿ ಸ್ಥಳದಲ್ಲಿ ನಿಲ್ಲಿಸಿದ್ದ ಎರಡು ಟೋಯಿಂಗ್ ವಾಹನ ಸೇರಿ ಆರು ವಾಹನಗಳು ಬೆಂಕಿಗಾಹುತಿಯಾಗಿವೆ. ನೋಡ ನೋಡುತ್ತಿದ್ದಂತೆಯೇ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
You Might Also Like
TAGGED:ಬೆಂಕಿ ಅವಘಡ