ಬೆಂಗಳೂರು : ಬೆಂಗಳೂರಿನ ನಗರ್ತಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮತ್ತೋರ್ವನ ಮೃತದೇಹ ಹೊರತೆಗೆಯಲಾಗಿದೆ. ಈ ಮೂಲಕ ಮೃತರ ಸಂಖ್ಯೆ 2 ಕ್ಕೇರಿಕೆಯಾಗಿದೆ.
ಬೆಂಗಳೂರಿನ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ಓರ್ವ ಸಜೀವ ದಹನಗೊಂಡು ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿ ಓರ್ವನ ಶವನ ಹೊರ ತೆಗೆದಿದ್ದು, ಮೃತರ ಸಂಖ್ಯೆ 2 ಕ್ಕೇರಿಕೆಯಾಗಿದೆ.
ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಅಗ್ನಿ ಅವಘಡದಿಂದ ಭಾರಿ ಪ್ರಮಾಣದ ವಸ್ತುಗಳು ಕೂಡ ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 3:30 ರ ವೇಳೆಗೆ ಈ ಅವಘಡ ಸಂಭವಿಸಿದೆ.