HomeLatest NewsBIG UPDATE : ಬೆಂಗಳೂರಿನ ನಗರ್ತಪೇಟೆಯಲ್ಲಿ ಭೀಕರ ಅಗ್ನಿ ಅವಘಡ ಕೇಸ್  : ಮೃತರ ಸಂಖ್ಯೆ...

BIG UPDATE : ಬೆಂಗಳೂರಿನ ನಗರ್ತಪೇಟೆಯಲ್ಲಿ ಭೀಕರ ಅಗ್ನಿ ಅವಘಡ ಕೇಸ್  : ಮೃತರ ಸಂಖ್ಯೆ 2 ಕ್ಕೇರಿಕೆ.!

ಬೆಂಗಳೂರು :  ಬೆಂಗಳೂರಿನ ನಗರ್ತಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,  ಮತ್ತೋರ್ವನ ಮೃತದೇಹ ಹೊರತೆಗೆಯಲಾಗಿದೆ. ಈ ಮೂಲಕ ಮೃತರ ಸಂಖ್ಯೆ 2 ಕ್ಕೇರಿಕೆಯಾಗಿದೆ.

ಬೆಂಗಳೂರಿನ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ಓರ್ವ ಸಜೀವ ದಹನಗೊಂಡು ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿ ಓರ್ವನ ಶವನ ಹೊರ ತೆಗೆದಿದ್ದು, ಮೃತರ ಸಂಖ್ಯೆ 2 ಕ್ಕೇರಿಕೆಯಾಗಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಅಗ್ನಿ ಅವಘಡದಿಂದ ಭಾರಿ ಪ್ರಮಾಣದ ವಸ್ತುಗಳು ಕೂಡ ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 3:30 ರ ವೇಳೆಗೆ ಈ ಅವಘಡ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular