
ಗುಣ ನಿಯಂತ್ರಣ ವಿಭಾಗದ ಲ್ಯಾಬ್ & ಕಚೇರಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಕಸ್ಮಿಕ ಬೆಂಕಿಯಿಂದ 10 ಮಂದಿಗೆ ಗಂಭೀರ ಗಾಯಗಳಾಗಿದೆ. ಘಟನೆ ನಡೆದು ಅರ್ಧಗಂಟೆ ಬಳಿಕ ಅಗ್ನಿಶಾಮಕ ದಳದ ವಾಹನ ಸ್ಥಳಕ್ಕೆ ದೌಡಾಯಿಸಿದೆ ಎಂದು ಹೇಳಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗಾಯಗೊಂಡ ಬಿಬಿಎಂಪಿ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

