ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಪೊಲೀಸರ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ.
ದೇವರ ಚಿಕ್ಕನಹಳ್ಳಿಯ ಕೃಷ್ಣ ಲೇಔಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟ್ಟಡಕ್ಕೆ ಬೆಂಕಿ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡ ವಿಚಾರ ತಿಳಿದ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ.
ಈ ವೇಳೆ ಕಟ್ಟಡದಲ್ಲಿ ಸಿಲುಕಿದ್ದ ಆರು ಜನರನ್ನು ಪೊಲೀಸರು ರಕ್ಷಿಸಿದ್ದಾರೆ. ನೆಲಮಹಡಿಯಲ್ಲಿ ಸಿಲುಕಿದ್ದ ಶೀಲಾ, ಗೋಪಿ, ಅಭಿಷೇಕ್, ರಮ್ಯಾ ಅವರನ್ನು ರಕ್ಷಣೆ ಮಾಡಲಾಗಿದೆ. ಸಣ್ಣಪುಟ್ಟ ಗಾಯಗಳಾಗಿದ್ದ ನಾಲ್ವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರನೇ ಮಹಡಿಯಲ್ಲಿ ಸಿಲುಕಿದ್ದ ಇನ್ನಿಬ್ಬರನ್ನು ಕೂಡ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಗ್ನಿ ಅವಘಡದಲ್ಲಿ ಎರಡು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಮೀಟರ್ ಬೋರ್ಡ್ ಗೆ ಹತ್ತಿರವಾಗಿ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.