HomeCrimeBreaking News: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಹೊತ್ತಿ ಉರಿದ ಆಟೋ

Breaking News: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಹೊತ್ತಿ ಉರಿದ ಆಟೋ

ಬೆಂಗಳೂರು ನಗರದ ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಿಧಾನಗತಿಯ ಸಂಚಾರವಿದೆ. ಸಂಚಾರಿ ಪೊಲೀಸರು ಈ ಕುರಿತು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಅಪ್‌ಡೇಟ್ ಕೊಟ್ಟಿದ್ದಾರೆ.

ಮಂಗಳವಾರ ಡಬಲ್ ಡೆಕ್ಕರ್ ಫ್ಲೈಓವರ್‌ನಲ್ಲಿ ಸಿಲ್ಕ್‌ಬೋರ್ಡ್ ಬಳಿ ಆಟೋಗೆ ಬೆಂಕಿ ಹೊತ್ತಿಕೊಂಡಿದೆ. ಈ ಅಪಘಾತದ ಕಾರಣ ಹೆಚ್‌ಎಸ್‌ಆರ್ ಲೇಔಟ್ ಕಡೆಗೆ ನಿಧಾನಗತಿಯ ಸಂಚಾರವಿದೆ.

ಆಟೋದಲ್ಲಿ ಎಷ್ಟು ಪ್ರಯಾಣಿಕರಿದ್ದರು? ಎಂಬ ಕುರಿತು ಯಾವುದೇ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ. ಆದರೆ ಬೆಂಕಿಯ ಕಾರಣಕ್ಕೆ ಆಟೋ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿಯನ್ನು ನಂದಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು, ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಅಪಘಾತದ ಕಾರಣ ಡಬಲ್ ಡೆಕ್ಕರ್ ಫ್ಲೈಓವರ್‌ನಲ್ಲಿ ಸಿಲ್ಕ್‌ಬೋರ್ಡ್ ಕಡೆಗೆ ನಿಧಾನಗತಿಯ ಸಂಚಾರವಿದ್ದು, ವಾಹನ ಸವಾರರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಇದು ಬೆಂಗಳೂರು ನಗರದ ಮೊಟ್ಟ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್‌ ರಾಗಿಗುಡ್ಡ ಮತ್ತು ಸಿಲ್ಕ್‌ಬೋರ್ಡ್‌ಗೆ ಇದು ಸಂಪರ್ಕವನ್ನು ಕಲ್ಪಿಸುತ್ತದೆ. ಈ ಫ್ಲೈ ಓವರ್ ಮೇಲೆ ಹಳದಿ ಮಾರ್ಗದ ನಮ್ಮ ಮೆಟ್ರೋ ಸಂಚಾರ ನಡೆಸುತ್ತದೆ. ಫ್ಲೈ ಓವರ್ ಒಂದು ಕಡೆ ಮಾತ್ರ ವಾಹನಗಳು ಸದ್ಯ ಸಂಚಾರವನ್ನು ನಡೆಸುತ್ತಿವೆ.

ಡಬಲ್ ಡೆಕ್ಕರ್ ಫ್ಲೈಓವರ್‌ನಲ್ಲಿ ಎರಡೂ ಬದಿಯ ವಾಹನ ಸಂಚಾರ ಶೀಘ್ರವೇ ಪ್ರಾರಂಭವಾಗಲಿದೆ. ಈ ಫ್ಲೈ ಡಬಲ್ ಡೆಕ್ಕರ್ ಫ್ಲೈ ಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಬಿಟಿಎಂ ಲೇಔಟ್, ಸಿಲ್ಕ್ ಬೋರ್ಡ್‌ನಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಿದೆ.

ಆಗಸ್ಟ್ 2025ರಲ್ಲಿ ಹಳದಿ ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರ ಸಹ ಆರಂಭವಾಗಿದ್ದು, ಸದ್ಯ 7 ರೈಲುಗಳು ಆರ್‌.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಸಂಚಾರವನ್ನು ನಡೆಸುತ್ತಿವೆ. ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಮಾರ್ಗ ಇದಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular