ಬಾಗ್ದಾದ್: ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 50 ಜನರು ಸಾವನ್ನಪ್ಪಿರುವ ಘಟನೆ ಇರಾಕ್ ನ ಕುಟ್ ನಗರದಲ್ಲಿ ನಡೆದಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಮಾಲ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿದಿದೆ. ಮಾಲ್ ಸಿಬ್ಬಂದಿ, ಗ್ರಾಹಕರು ಸೇರಿ 50 ಜನರು ಮೃತಪಟ್ಟಿದ್ದಾರೆ, ಹಲವರು ಗಾಯಗೊಂಡಿದ್ದಾರೆ.
ಪ್ರಕರಣ ಸಂಬಂಧ ಮಾಲ್ ಮಾಲೀಕನ ವಿರುದ್ಧ ದೂರು ದಾಖಲಾಗಿದೆ. ಈ ಪ್ರಾಂತ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಿಸಲಾಗಿದೆ.