ಬೆಂಗಳೂರು : ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾದ ಪರಿಣಾಮ ಸ್ಥಳೀಯ ದೋಸೆ ಹೋಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು, ಹೋಟೆಲ್‌ನಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಬೆಂಗಳೂರಿನ ಜನನಿಬಿಡ ಪ್ರದೇಶವಾದ ಚಿಕ್ಕಪೇಟೆಯಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳೀಯ ದೋಸೆ ಹೋಟೆಲ್‌ವೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಗ್ಯಾಸ್ ಸಿಲಿಂಡರ್ ಸೋರಿಕೆ ಹಿನ್ನೆಲೆ ಘಟನೆ ಸಂಭವಿಸಿದೆ. ಪರಿಣಾಮ ಹೋಟೆಲ್‌ನ ಪೀಠೋಪಕರಣಗಳು ಮತ್ತು ಇತರೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈ ಘಟನೆಗೆ ಸಂಬಂಧಿಸಿದಂತೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಗ್ನಿ ಅವಘಡಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

