HomeIndiaಅಹಮದಾಬಾದ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, 100 ಕ್ಕೂ ಹೆಚ್ಚು ರೋಗಿಗಳ ಸ್ಥಳಾಂತರ

ಅಹಮದಾಬಾದ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, 100 ಕ್ಕೂ ಹೆಚ್ಚು ರೋಗಿಗಳ ಸ್ಥಳಾಂತರ

ಗುಜರಾತ್‌ ನ ಅಹಮದಾಬಾದ್‌ ನ ಸಾಹಿಬಾಗ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಆಗ್ನಿ ಜ್ವಾಲೆಯನ್ನು ನಂದಿಸಲು ಸುಮಾರು 20-25 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. 100 ಕ್ಕೂ ಹೆಚ್ಚು ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಎರಡನೇ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾದಿಯಾ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಜಾನೆ 4:30ರ ಸುಮಾರಿಗೆ ಕರೆ ಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ತಂಡಗಳು ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿವೆ. ಬೆಂಕಿ ಹೊತ್ತಿಕೊಂಡ ಆಸ್ಪತ್ರೆಯ ನೆಲಮಾಳಿಗೆಯಿಂದ ಹೊಗೆ ಹೊರಹೊಮ್ಮುತ್ತಲೇ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎಂಡಿ ಚಂಪಾವತ್ ಪಿಟಿಐಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular